Wednesday, 9th October 2024

ನೂತನ ರಾಜ್ಯಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ

ನವದೆಹಲಿ: ನಟ ಜಗ್ಗೇಶ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಹಾಗೂ ಜೈರಾಮ್ ರಮೇಶ್ ನೂತನ ರಾಜ್ಯಸಭಾ ಸದಸ್ಯರಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳ ಸಮ್ಮುಖದಲ್ಲಿ ಕರ್ನಾಟಕದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ನಟ ಜಗ್ಗೇಶ್ ಕನ್ನಡದಲ್ಲಿ ರಾಘವೇಂದ್ರಸ್ವಾಮಿಗಳ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ದರು.

ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್, ಲೆಹರ್ ಸಿಂಗ್ ಹಾಗೂ ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಆಯ್ಕೆಯಾಗಿದ್ದಾರೆ.