Saturday, 14th December 2024

ರೂಪಾಂತರಗೊಂಡ ಕೊರೋನಾ ವೈರಸ್: ಇಂದು ಸಿಎಂಗಳೊಂದಿಗೆ ಪ್ರಧಾನಿ ತುರ್ತು ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ರೂಪಾಂತರಗೊಂಡ ಕೊರೋನಾ ವೈರಸ್ ತಡೆಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಬ್ರಿಟನ್ ನಲ್ಲಿ ಪತ್ತೆಯಾಗಿರುವ ಕೊರೊನಾ ಹೊಸ ಮಾದರಿ ಭಾರೀ ಆತಂಕ ಹುಟ್ಟುಹಾಕಿದೆ. ಈ ಕಾರಣದಿಂದ ಸೋಂಕು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.

ಇವತ್ತು ಸಂಪುಟ ಸಭೆ ನಡೆಯಲಿದ್ದು, ಡಿಸೆಂಬರ್ 25 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಸಭೆ ನಡೆಸಲಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಭೆ ನಡೆಸಿ, ಪರಿಸ್ಥಿತಿ ಎದುರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.