Sunday, 13th October 2024

ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಬೆಂಕಿ ದುರಂತ: ಇಬ್ಬರ ಸಾವು

ವದೆಹಲಿ: ದೆಹಲಿಯ ಗ್ರೇಟರ್ ಕೈಲಾಶ್ II ಪ್ರದೇಶದಲ್ಲಿರುವ ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಬೆಂಕಿ ದುರಂತ ಸಂಭವಿ ಸಿದ್ದು, ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ 13 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆರೈಕೆ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ದೆಹಲಿಯ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತೆ ಚಂದನ್ ಚೌಧರಿ ತಿಳಿಸಿದ್ದಾರೆ.