Sunday, 15th December 2024

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ನಡೆಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶ್ಲಾಘನೆ

ನವದೆಹಲಿ: ದೇಶದ ನಾಯಕಿ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿರುವ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಆರ್ಡರ್ನ್ ಅವರ ನಡೆಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶ್ಲಾಘಿಸಿ, ‘ಭಾರತದ ರಾಜಕೀಯಕ್ಕೆ ಅವರಂತಹವರು ಬೇಕು’ ಎಂದು ಹೇಳಿದ್ದಾರೆ.

ಫೆಬ್ರವರಿ 7 ತನ್ನ ಕಚೇರಿಯಲ್ಲಿ ಕೊನೆಯ ದಿನವಾಗಿರುತ್ತದೆ ಎಂದು ಆರ್ಡರ್ನ್ ನೇಪಿಯರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಅಕ್ಟೋಬರ್ 14 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆ ವರೆಗೆ ಅವರು ಶಾಸಕರಾಗಿ ಮುಂದುವರಿಯಲಿದ್ದಾರೆ.

ಕಿವೀಸ್ ಪಿಎಂ ಜಸಿಂಡಾ ಅರ್ಡರ್ನ್ ಅವರು ಪ್ರಧಾನಿ ಹುದ್ದೆ ತ್ಯಜಿಸುತ್ತಿರುವುದಾಗಿ ಹೇಳಿದ್ದಾರೆ. ಭಾರತೀಯ ರಾಜಕೀಯಕ್ಕೆ ಅವಳಂತಹ ಹೆಚ್ಚಿನ ವರು ಬೇಕು’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ್ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.