Wednesday, 11th December 2024

ವಿವಾದಾತ್ಮಕ ಕಾನೂನು: ಜ.19ರಂದು ಮತ್ತೊಂದು ಮಾತುಕತೆ

ನವದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಪ್ರತಿಭಟನಾ ನಿರತ ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 9ನೇ ಸುತ್ತಿನ ಮಾತುಕತೆ ವಿಫಲವಾಗಿದೆ. ಇನ್ನು ಜ.19ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

ಸಾವಿರಾರು ರೈತರು ಕಳೆದ ವರ್ಷ ನವೆಂಬರ್ 26ರಿಂದ ದೆಹಲಿಯ ವಿವಿಧ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸುವ ಸೂಚನೆಯ ಹಿನ್ನೆಲೆಯಲ್ಲಿ, ಪ್ರತಿಭಟನಾ ನಿರತ ರೈತ ಮುಖಂಡರು ಗುರುವಾರ 9ನೇ ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದರು.

ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರನ್) ಜೋಗಿಂದರ್ ಸಿಂಗ್ ಉಗ್ರನ್ ಈ ವಿಷಯ ತಿಳಿಸಿದ್ದು, ‘ನಾವು ನಾಳೆ ಸರ್ಕಾರದ ಜೊತೆ ಮಾತುಕತೆ ನಡೆಸಲಿದ್ದೇವೆ. ಶುಕ್ರವಾರದ ಸಭೆಯಲ್ಲಿ ನಮಗೆ ಹೆಚ್ಚಿನ ಭರವಸೆ ಇಲ್ಲ, ಏಕೆಂದರೆ ಸರ್ಕಾರವು ಎಸ್ ಸಿ ನೇಮಕ ಮಾಡಿದ ಸಮಿತಿಯನ್ನು ಉದಾಸೀನ ಮಾಡುತ್ತದೆ. ನಮ್ಮ ಸಮಸ್ಯೆಗಳನ್ನು ಬಗೆಹರಿಸುವ ಸದುದ್ದೇಶ ಸರ್ಕಾರಕ್ಕೆ ಇಲ್ಲ’ ಎಂದು ಹೇಳಿದ್ದರು.