2022-23ರ ಬಜೆಟ್ ಪ್ರಕಾರ ನಗರಾಭಿವೃದ್ಧಿ ಹಾಗೂ ಪುರಸಭೆಗಳ ವ್ಯವಹಾರದ ಭಾಗವಾಗಿ 12,818 ಕೋಟಿ ಅನುದಾನವಿದ್ದರೂ ರಾಜ್ಯ ಸರ್ಕಾರ ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡು ತ್ತಿಲ್ಲ ಎಂದು ನ್ಯಾಯ ಪೀಠ ತಿಳಿಸಿದೆ.
ಎನ್ಜಿಟಿ ಅಧ್ಯಕ್ಷ ನ್ಯಾಯಮೂತಿ ಎ.ಕೆ.ಗೋಯೆಲ್ ನೇತೃತ್ವದ ಪೀಠವು ಜನರಿಗಾಗಿ ಮಾಲಿನ್ಯ ಮುಕ್ತ ವಾತಾವರಣ ಕಲ್ಪಿಸುವುದು ಸರ್ಕಾರದ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂಬುದನ್ನು ಹೇಳಿದೆ.
ನಗರ ಪ್ರದೇಶಗಳಲ್ಲಿ ದಿನಕ್ಕೆ 2,758 ಮಿಲಿಯನ್ ಲೀಟರ್ ಕೊಳಚೆ ಉತ್ಪಾದನೆಯಾಗುತ್ತಿದೆ. ಈ ಪೈಕಿ 1,505 ಮಿಲಿಯನ್ ಲೀಟರ್ ನಷ್ಟು ಕೊಳಚೆ ಸಂಸ್ಕರಿಸುವ ಸಾಮರ್ಥ್ಯವಿದೆ. ಆದರೂ ದಿನಕ್ಕೆ 1,268 ಲೀಟರ್ ನಷ್ಟು ತ್ಯಾಜ್ಯವನ್ನು ಮಾತ್ರವೇ ಸಂಸ್ಕರಿಸ ಲಾಗುತ್ತಿದ್ದು, ಉಳಿದ 1,490 ಮಿಲಿಯನ್ ಲೀಟರ್ ನಷ್ಟು ತ್ಯಾಜ್ಯ ಹಾಗೆಯೇ ಉಳಿಸುತ್ತಿದೆ ಎಂದು ಎನ್ಜಿಟಿ ತಿಳಿಸಿದೆ.