Thursday, 12th December 2024

ಸುಧಾ ಭಾರದ್ವಾಜ್ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಎನ್‌ಐಎ ಅರ್ಜಿ

ನವದೆಹಲಿ: ಭೀಮಾಕೋರೆಗಾಂವ್ ಪ್ರಕರಣದಲ್ಲಿ ವಕೀಲೆ-ಸಾಮಾಜಿಕ ಹೋರಾಟಗಾರ್ತಿ ಸುಧಾ ಭಾರದ್ವಾಜ್ ಅವರಿಗೆ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್ ನ ಡಿ.1 ರ ಆದೇಶ ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಸುಧಾ ಭಾರದ್ವಾಜ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಡೀಫಾಲ್ಟ್ ಜಾಮೀನು ಮಂಜೂರು ಮಾಡಿದೆ. ಆದೇಶ ನೀಡಿದ ನ್ಯಾಯಮೂರ್ತಿಗಳಾದ ಎಸ್‌.ಎಸ್. ಶಿಂಧೆ ಮತ್ತು ಎನ್‌.ಜೆ. ಜಮಾದಾರ್ ಅವರ ಪೀಠ, ಮುಂಬೈ ವಿಶೇಷ ಎನ್‌ಐಎ ನ್ಯಾಯಾ ಲಯಕ್ಕೆ ಡಿ.8 ರಂದು ಪ್ರಕರಣವನ್ನು ಕೈಗೆತ್ತಿಕೊಳ್ಳಲು ಸುಧಾ ಅವರ ಜಾಮೀನು ಮತ್ತು ಬಿಡುಗಡೆಯ ದಿನಾಂಕದ ಷರತ್ತು ಗಳನ್ನು ನಿರ್ಧರಿಸಲು ನಿರ್ದೇಶಿಸಿದೆ.

ಕೋರೆಗಾಂವ್-ಭೀಮಾ ಪ್ರಕರಣವು ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಸಮಾವೇಶದ ಮರುದಿನ ಪುಣೆಯ ಹೊರವಲಯದಲ್ಲಿರುವ ಕೋರೆ ಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ಹೇಳಿದ್ದಾರೆ.