ಚೆನ್ನೈ: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಭಾರತದ ಮೂರು ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ 60 ವಿವಿಧ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ದಾಳಿ ನಡೆಸಿದೆ.
ಭಯೋತ್ಪಾದಕ ಸಂಘಟನೆ ಐಸಿಸ್ಗೆ ಸೇರಿದ ಶಂಕಿತರನ್ನು ಬಂಧಿಸುವ ನಿಟ್ಟಿನಲ್ಲಿ ಸಂಸ್ಥೆ ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ.
ಕಳೆದ ವರ್ಷ ಅಕ್ಟೋಬರ್ 23 ರಂದು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ಕೊಟ್ಟೈ ಈಶ್ವರನ್ ದೇವಾಲಯದ ಮುಂಭಾಗದಲ್ಲಿ ಸ್ಫೋಟಕಗಳನ್ನು ತುಂಬಿದ ಕಾರಿನಲ್ಲಿ ಬಾಂಬ್ ಸ್ಫೋಟಿಸಿದ ಪ್ರಕರಣದಲ್ಲಿ ಎನ್ಐಎ ಕಳೆದ ವರ್ಷ ಅಕ್ಟೋಬರ್ 27 ರಂದು ತನಿಖೆ ಆರಂಭಿಸಿತು.
ಕರ್ನಾಟಕದಲ್ಲೂ ಎನ್ಐಎ 60 ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಶೋಧಕಾರ್ಯಾಚರಣೆ ಕೈಗೊಂಡಿದೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮವೊಂದು ವರದಿ ಮಾಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.