Thursday, 12th December 2024

ಆರು ರಾಜ್ಯಗಳ 51 ಸ್ಥಳಗಳಲ್ಲಿ ಎನ್​ಐಎ ದಾಳಿ

ನವದೆಹಲಿ: ರಾಷ್ಟ್ರೀಯ ಭದ್ರತಾ ದಳ (ಎನ್​ಐಎ) ಅಧಿಕಾರಿಗಳು ಲಾರೆನ್ಸ್ ಬಾಂಬಿಹಾ ಮತ್ತು ಅರ್ಶ್ ಡಲ್ಲಾ ಗ್ಯಾಂಗ್‌ಗಳ ಸಹಚರರಿಗೆ ಸಂಬಂಧಪಟ್ಟ ಪ್ರದೇಶಗಳಲ್ಲಿ ಬುಧವಾರ ದಾಳಿ ನಡೆಸಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಸುಮಾರು 51 ಸ್ಥಳಗಳಲ್ಲಿ ದಾಳಿ ನಡೆಯು ತ್ತಿದೆ. ಭಯೋತ್ಪಾದಕರು, ದರೋಡೆಕೋರರು ಮತ್ತು ಡ್ರಗ್ ಡೀಲರ್‌ಗಳ ನಡುವಿನ ಸಂಬಂಧ ಕೊನೆಗೊಳಿಸಲು ತನಿಖಾ ದಳ ಕಠಿಣ ಕ್ರಮ ಕೈಗೊಳ್ಳುತ್ತಿದೆ.