ತಿರುವನಂತಪುರಂ: ರಾಜ್ಯದಲ್ಲಿ ಕರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾತ್ರಿ ಕರ್ಫ್ಯೂ ಹಾಗೂ ಭಾನುವಾರದ ಲಾಕ್‌ಡೌನ್‌ನ್ನು ಮುಂದುವರೆಸ ಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ 29,682 ಸೋಂಕಿತರು ಪತ್ತೆಯಾಗಿ, 25,910 ಮಂದಿ ಚೇತರಿಸಿಕೊಂಡಿದ್ದಾರೆ. 142 ಮಂದಿ ಮೃತಪಟ್ಟಿದ್ದಾರೆ. ಒಟ್ಟು 2,50,065 ಮಂದಿ ಸೋಂಕಿತರಿದ್ದಾರೆ. ಕೇರಳದಲ್ಲಿ ಇದುವರೆಗೆ 21,422 ಮಂದಿ ಮೃತಪಟ್ಟಿದ್ದಾರೆ.
ಮೂರನೇ ಅಲೆ ಭೀತಿ ನಡುವೆಯೇ ಶನಿವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,618 ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 330 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,29,45,907ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,40,225ಕ್ಕೆ ಏರಿಕೆ ಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 4,05,681ಕ್ಕೆ ತಲುಪಿದೆ. 36,385 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,21,00,001ಕ್ಕೆ ತಲುಪಿದೆ.