Saturday, 14th December 2024

ದೆಹಲಿಯಲ್ಲಿ ಏ.30ರವರಗೆ ರಾತ್ರಿ ಕರ್ಫ್ಯೂ

ನವದೆಹಲಿ: ಕೋವಿಡ್ -19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರವು ಏ.30ರ ವರಗೆ ರಾತ್ರಿ ಕರ್ಫ್ಯೂ ವಿಧಿಸಿದ್ದು, ಇಂದಿನಿಂದ ರಾತ್ರಿ 10 ರಿಂದ ಬೆಳಗ್ಗೆ 5ರ ವರೆಗೆ ರಾಜಧಾನಿಯಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ 3548 ಕೊರೊನಾ ಪ್ರಕರಣಗಳು ದಾಖಲಾಗಿದ್ದರೆ, 15 ಜನರು ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 11,096ಕ್ಕೆ ತಲುಪಿದೆ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.

ಸೋಂಕು ಹಬ್ಬುವುದನ್ನು ನಿಯಂತ್ರಿಸಲು ರಾತ್ರಿ ಕರ್ಫ್ಯೂ  ಆದೇಶ ಮಾಡಿದ್ದು, ಇದು ಏ.30ರ ವರೆಗೆ ಮುಂದುವರಿಯುತ್ತದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily