Friday, 22nd November 2024

ಪಂಜಾಬ್‌ನ 9 ಜಿಲ್ಲೆಗಳಲ್ಲಿ ನೈಟ್‌ ಕರ್ಫ್ಯೂ 2 ಗಂಟೆ ಹೆಚ್ಚಳ

ಚಂಡೀಗಢ: ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ 9 ಜಿಲ್ಲೆಗಳಲ್ಲಿ ವಿಧಿಸಿದ್ದ ರಾತ್ರಿ ಕರ್ಫ್ಯೂ ಅವಧಿಯನ್ನು 2 ಗಂಟೆ ವಿಸ್ತರಿಸಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಾರ್ವಜನಿಕರು ಕೋವಿಡ್‌ ಸುರಕ್ಷತಾ ಕ್ರಮಗಳನ್ನು ತಪ್ಪದೆ ಪಾಲಿಸಬೇಕು. ಪರಿಸ್ಥಿತಿ ಹೀಗೆ ಮುಂದುವರಿದರೆ ಕಠಿಣ ನಿಯಮ ಜಾರಿಗೊಳಿಸಲಾಗುವುದು’ ಎಂದರು.

‘ಸರ್ಕಾರ ಜನರ ಮೇಲೆ ಕಠಿಣ ನಿಯಮಗಳನ್ನು ಸುಲಭವಾಗಿ ಹೇರುವುದಿಲ್ಲ. ಆದರೆ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿ ಸುವ ಮೂಲಕ ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಲೂಧಿಯಾನ, ಜಲಂಧರ್, ಪಟಿಯಾಲ, ಮೊಹಾಲಿ, ಅಮೃತಸರ, ಗುರುದಾಸ್‌ಪುರ, ಹೋಶಿಯಾರ್‌ಪುರ, ಕಪುರ್ಥಾಲಾ ಮತ್ತು ರೂಪ್‌ನಗರ್‌ದಲ್ಲಿ ರಾತ್ರಿ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಇರುತ್ತದೆ ಎಂದು ತಿಳಿಸಿದರು.

ಪಂಜಾಬ್‌ನಲ್ಲಿ ಬುಧವಾರ 2,039 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 35 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿತ್ತು.

ಲುಧಿಯಾನದಲ್ಲಿ 233, ಜಲಂಧರ್‌ 277, ಪಟಿಯಾಲ 203, ಮೊಹಾಲಿ 222, ಅಮೃತಸರ 178, ಗುರುದಾಸ್‌ಪುರ 112, ಹೋಶಿ ಯಾರ್‌ಪುರ್‌ 191, ಕಪುರ್ಥಾಲಾ 157 ಮತ್ತು ರೂಪ್‌ನಗರ್‌ದಲ್ಲಿ 113 ಪ್ರಕರಣಗಳು ದಾಖಲಾಗಿದ್ದವು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily