Friday, 20th September 2024

ಮಮತಾ ಬ್ಯಾನರ್ಜಿ ರಾಜೀನಾಮೆಗೆ ತಾಯಿ ಆಶಾ ದೇವಿ ಆಗ್ರಹ

ವದೆಹಲಿ: ಮುಷ್ಕರದ ಜೊತೆಗೆ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಹೆಚ್ಚಿನ ಆಗ್ರಹ ಕೇಳಿ ಬರುತ್ತಿದ್ದು, ಇದೀಗ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಶಾ ದೇವಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಗಳು ತಮ್ಮ ಅಧಿಕಾರ ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಬದಲು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನ ವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಆಶಾ ದೇವಿ ಕಿಡಿಕಾರಿದ್ದಾರೆ.

ಉತ್ತರಪ್ರದೇಶದ ಬಲಿಯಾದಲ್ಲಿ ಈ ಕುರಿತು ಮಾತನಾಡಿದ ಆಶಾ ದೇವಿ, ಜನರ ಗಮನ ಬೇರೆಡೆ ಸೆಳೆಯಲು ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ. ಒಬ್ಬ ಮಹಿಳೆಯಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಪರಿಸ್ಥಿತಿ ನಿಭಾಯಿಸಲು ವಿಫಲರಾದ ಕಾರಣ ಅವರು ರಾಜೀನಾಮೆ ನೀಡುವುದು ಸೂಕ್ತ ಎಂದು ನಿರ್ಭಯಾ ಅವರ ತಾಯಿ ಆಗ್ರಹಿಸಿದ್ದಾರೆ.

ಆಗಸ್ಟ್​ 09ರಂದು ಕಲ್ಕತ್ತಾದ ಆರ್​ಜಿಕಾರ್​ ಮಡಿಕಲ್​ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು.