ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊರನಡೆದಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ರಾಜಕೀಯ ಪಕ್ಷಪಾತದಿಂದ ಕೂಡಿದೆ ಎಂದು ಟಿಎಂಸಿ ಮುಖ್ಯಸ್ಥರು ಆರೋಪಿಸಿದ್ದಾರೆ.
ನಾನು ಸಭೆಯನ್ನು ಬಹಿಷ್ಕರಿಸಿ ಹೊರಬಂದಿದ್ದೇನೆ. ಚಂದ್ರಬಾಬು ನಾಯ್ಡು ಅವರಿಗೆ 20 ನಿಮಿಷ, ಅಸ್ಸಾಂ, ಗೋವಾ ಮತ್ತು ಛತ್ತೀಸ್ ಗಢದ ಮುಖ್ಯಮಂತ್ರಿಗಳಿಗೆ 10-12 ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಲಾಯಿತು. ಕೇವಲ ಐದು ನಿಮಿಷಗಳ ನಂತರ ನನ್ನನ್ನು ಮಾತನಾಡದಂತೆ ತಡೆಯಲಾಯಿತು ಎಂದು ಆರೋಪಿಸಿದರು.
ನನ್ನ ಮೈಕ್ ಆಫ್ ಆಗಿತ್ತು. ನೀವು ನನ್ನನ್ನು ಏಕೆ ತಡೆದಿದ್ದೀರಿ, ಏಕೆ ತಾರತಮ್ಯ ಮಾಡುತ್ತಿದ್ದೀರಿ ಎಂದು ನಾನು ಕೇಳಿದೆ. ನಾನು ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ, ನೀವು ಸಂತೋಷವಾಗಿರಬೇಕು, ಅದರ ಬದಲು ನೀವು ನಿಮ್ಮ ಪಕ್ಷಕ್ಕೆ, ನಿಮ್ಮ ಸರ್ಕಾರಕ್ಕೆ ಹೆಚ್ಚಿನ ಅವಕಾಶ ನೀಡುತ್ತಿದ್ದೀರಿ. ಇದು ಬಂಗಾಳಕ್ಕೆ ಮಾತ್ರವಲ್ಲ, ಎಲ್ಲಾ ಪ್ರಾದೇಶಿಕ ಪಕ್ಷಗಳಿಗೂ ಮಾಡಿದ ಅವಮಾನ. ಇದು ಅನ್ಯಾಯ” ಎಂದು ಅವರು ಹೇಳಿದರು.