Sunday, 15th December 2024

8ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆರ್ ಜೆಡಿ ಮೈತ್ರಿಯೊಂದಿಗೆ ದಾಖಲೆಯ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನಿತೀಶ್ ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿ ಸಿದ್ದು, ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ನಿತೀಶ್ ಕುಮಾರ್ 9 ಪಕ್ಷಗಳ ಮಹಾಘಟಬಂಧನ್ ನಾಯಕರಾಗಿ ಆಯ್ಕೆಯಾಗಿದ್ದಾರೆ. RJD, ಕಾಂಗ್ರೆಸ್, JD(U), ಮತ್ತು CPI, CPIML ಮತ್ತು ಇತರರು ಸೇರಿದಂತೆ ಎಡ ಪಕ್ಷಗಳು ನಿತೀಶ್ ಕುಮಾರ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದವು.

ಮಂಗಳವಾರ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್ ಕುಮಾರ್ ಬಳಿಕ ರಾಜ್ಯ ಪಾಲರಿಗೆ 164 ಶಾಸಕರ ಪಟ್ಟಿಯನ್ನು ಸಲ್ಲಿಸಿ ದ್ದರು. ಬಳಿಕ ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರು ನಿತೀಶ್ ಕುಮಾರ್ ಅವರನ್ನು ಆಹ್ವಾನಿಸಿದ್ದರು.

ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ, ಆಗಸ್ಟ್​ 15ರ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿದೆ. ಹಣಕಾಸು, ರಸ್ತೆ ನಿರ್ಮಾಣ, ಪಟ್ಟಣ ಯೋಜನೆ, ಕೃಷಿ ಮತ್ತು ಭೂ ಕಂದಾಯ ಖಾತೆಗಳನ್ನು ನೀಡುವಂತೆ ಆರ್‌ಜೆಡಿ ಬೇಡಿಕೆ ಇಟ್ಟಿವೆ.