Thursday, 12th December 2024

ದ್ವೈವಾರ್ಷಿಕ ಚುನಾವಣೆ: ನಾಮಪತ್ರ ಸಲ್ಲಿಸಿದ ನಿತೀಶ್ ಕುಮಾರ್

ಪಾಟ್ನಾ: ಬಿಹಾರ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಬಿಹಾರ ವಿಧಾನ ಪರಿಷತ್‌ಗೆ ಸತತ ನಾಲ್ಕನೇ ಅವಧಿಗೆ ಅವರು ಸ್ಪರ್ಧಿಸುತ್ತಿದ್ದಾರೆ.

ಬಿಜೆಪಿಯ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಮತ್ತು ರಾಜೀವ್ ರಂಜನ್ ಸಿಂಗ್ ಸೇರಿದಂತೆ ಆಡಳಿತಾರೂಢ ಎನ್‌ಡಿಎಯ ಹಿರಿಯ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಚುನಾವಣಾ ಆಯೋಗವು ಬಿಹಾರ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಘೋಷಿಸಿದೆ. ಜೆಡಿಯು ಎರಡು ಸ್ಥಾನಗಳನ್ನು ಗೆಲ್ಲಲಿದೆ. 2005ರಿಂದ ನಿತೀಶ್ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದುಕೊಂಡೇ ಸಿಎಂ ಆಗಿದ್ದಾರೆ.

ಮಾ.11 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ನಾಮಪತ್ರ ಹಿಂಪಡೆಯಲು ಮಾರ್ಚ್ 14 ಕೊನೆಯ ದಿನ. ಮಾರ್ಚ್ 21ರಂದು ಮತದಾನ ನಡೆಯಲಿದೆ.