Saturday, 21st September 2024

’ನಿವಾರ್’‌ ಭೀತಿ: ತ.ನಾಡಿಯಲ್ಲಿ ನಾಳೆ ಸಾರ್ವತ್ರಿಕ ರಜೆ, ಪುದುಚೇರಿಯಲ್ಲಿ ನಿಷೇಧಾಜ್ಞೆ

ಚೆನ್ನೈ: ತಮಿಳುನಾಡು ಕರಾವಳಿಗೆ ಬುಧವಾರ ’ನಿವಾರ್’​ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಮುಂಜಾಗೃತ ಕ್ರಮವಾಗಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹೈ ಆಲರ್ಟ್​ ಘೋಷಣೆ ಮಾಡಲಾಗಿದೆ.

ರಾಜ್ಯದ್ಯಾಂತ ರೆಡ್​ ಆಲರ್ಟ್​ ಘೋಷಣೆ ಮಾಡಿದರೂ, ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು ಸರ್ಕಾರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಪುದುಚೇರಿಯಲ್ಲಿ ಮುಂದಿನ ಮೂರು ದಿನ ಸೆಕ್ಷನ್​ 144 ನಿಷೇಧಾಜ್ಞೆ ವಿಧಿಸಲಾಗಿದೆ.

ಚಂಡ ಮಾರುತದಿಂದ ಇಲ್ಲಿನ ವಿಲ್ಲುಪುರಂ, ಕಡಲೂರು, ಪುದುಚೇರಿ ಮತ್ತು ಚೆನ್ನೈನಲ್ಲಿ ಅತಿ ಹೆಚ್ಚು ಮಳೆಹಾನಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನಿವಾರ್​ ಚಂಡಮಾರುತದ ಪರಿಣಾಮ ಆಂಧ್ರ ಪ್ರದೇಶದ ಕರಾವಳಯಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ರಾಯಲ ಸೀಮಾದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು ಈ ಹಿನ್ನಲೆ ಮುನ್ನೆಚ್ಚರಿಕೆ ವಹಿಸುವಂತೆ ಆಂಧ್ರ ಸರ್ಕಾರವನ್ನು ಎಚ್ಚರಿಸಲಾಗಿದೆ.