Saturday, 21st September 2024

‘ನಿವಾರ್’ ಚಂಡಮಾರುತ ಭೀತಿ: ತಮಿಳುನಾಡು ಮತ್ತು ಪುದುಚೆರಿ, ಕರೈಕಲ್’ನಲ್ಲಿ ಭಾರೀ ಮಳೆ ಸಾಧ್ಯತೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬುಧವಾರ ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ‍ಪ್ರದೇಶದಲ್ಲಿ ‘ನಿವಾರ್’ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ ಎಂದು ಮಂಗಳವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡು ಮತ್ತು ಪುದುಚೆರಿ, ಕರೈಕಲ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

‘ಮುಂಜಾಗ್ರತಾ ಕ್ರಮವಾಗಿ ಚೆಂಬರಂಬಕ್ಕಂ ಸೇರಿದಂತೆ ಇಲ್ಲಿನ ಜಲಾಶಯಗಳ ಪ್ರದೇಶಗಳ ಮೇಲೆ ನಿರಂತರವಾಗಿ ನಿಗಾ ವಹಿಸ ಲಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿ ದ್ದಾರೆ.

ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳಿಗೆ ‘ನಿವಾರ್’ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗ ಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

‘ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮಾತನಾಡಿ ದ್ದೇನೆ. ಕೇಂದ್ರದಿಂದ ಸಾಧ್ಯವಾದಷ್ಟು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.