ನವದೆಹಲಿ: ಉದ್ಯಮಿ ಮೆಹುಲ್ ಚೋಕ್ಸಿಯ ಜಾಮೀನು ಅನ್ನು ಡೊಮೆನಿಕಾ ಕೋರ್ಟ್ ನಿರಾಕರಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದಾನೆ.
ಆಂಟಿಗುವಾದಿಂದ ಡೊಮಿನಿಕಾಕ್ಕೆ ಅಕ್ರಮವಾಗಿ ನುಸುಳಿರುವ ಬಗ್ಗೆ ಡೊಮಿ ನಿಕಾ ಕೋರ್ಟ್ನಲ್ಲಿ ಬುಧವಾರ ವಿಚಾರಣೆ ನಡೆದಿತ್ತು. ಪ್ರಕರಣ ಸಂಬಂಧ ಜಾಮೀನು ನಿರಾಕರಿಸಿದೆ ಎಂದು ಅವರ ವಕೀಲ ವಿಜಯ್ ಅಗರ್ವಾಲ್ ತಿಳಿಸಿದ್ದಾರೆ. ಅಂತೆಯೇ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿಚಾರಣೆ ಕೂಡ ನಡೆಯಲಿದ್ದು, ಈ ವಿಚಾರಣೆಗೆ ಚೋಕ್ಸಿ ಕೂಡ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಳೆದ ಮೇ 23 ರಂದು ಊಟಕ್ಕೆಂದು ಹೊರಟಿದ್ದ ಮೆಹುಲ್ ಚೋಕ್ಸಿ ಆಂಟಿಗುವಾದಿಂದ ನಾಪತ್ತೆಯಾಗಿದ್ದರು. ಬಳಿಕ ಆಂಟಿಗುವಾ ಪೊಲೀಸರು ಚೋಕ್ಸಿಗಾಗಿ ತೀವ್ರ ಶೋಧ ನಡೆಸಿದ್ದರು. ಈ ವೇಳೆ ಚೋಕ್ಸಿ ಡೊಮೆನಿಕಾದಲ್ಲಿ ಬಂಧನಕ್ಕೀಡಾಗಿದ್ದರು. ಡೊಮೆನಿಕಾಗೆ ಅಕ್ರಮವಾಗಿ ಪ್ರವೇಶ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು ಎನ್ನಲಾಗಿದೆ.