Wednesday, 11th December 2024

ಆಜಂ ಖಾನ್‍ಗೆ ಮಧ್ಯಂತರ ಜಾಮೀನು ನಿರಾಕರಣೆ

ನವದೆಹಲಿ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‍ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ಪೀಠವು, ಅಜಂಖಾನ್ ಅರ್ಜಿಯ ವಿಚಾರಣೆ ನಡೆಸಿ ಅಭಿಪ್ರಾಯ ತಿಳಿಸಿದೆ.

ಅಜಂಖಾನ್ ಕೆಳ ಹಂತದ ನ್ಯಾಯಾಲಯವನ್ನು ಸಂಪರ್ಕಿಸಲು ಸ್ವತಂತ್ರರಿದ್ದಾರೆ. ಖಾನ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಅಜಂಖಾನ್ ವಿರುದ್ಧ 87 ಎಫ್‍ಐಆರ್ ಗಳು ದಾಖಲಿಸ ಲಾಗಿವೆ. ಈ ಪೈಕಿ 84 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ ಎಂದು ಹೇಳಿದರು.

ವಾದ ಆಲಿಸಿದ ನ್ಯಾಯಮೂರ್ತಿಗಳು ಜಾಮೀನಿಗಾಗಿ 32 ಅರ್ಜಿಗಳನ್ನು ಸಲ್ಲಿಸಿರುವ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದ್ದು, ನ್ಯಾಯಾಲಯದಲ್ಲಿ ರಾಜಕೀಯ ತರಬೇಡಿ ಎಂದು ಅಸಮಧಾನ ವ್ಯಕ್ತಪಡಿಸಿದ್ದರು.

ನನ್ನ ಕಕ್ಷೀದಾರ ಜೈಲಿನೊಳಗಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯವನ್ನು ತರುವುದಿಲ್ಲ. ಅರ್ಜಿಯ ವಿಚಾರ ಣೆಗೆ ಮನವಿ ಮಾಡಿದರೂ ಕಳೆದ 3-4 ತಿಂಗಳಿಂದ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಳ್ಳಲಾಗುತ್ತಿಲ್ಲ ಎಂದು ಸಿಬಲ್ ವಾದಿಸಿದ್ದಾರೆ.