ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣವನ್ನು ದೆಹಲಿ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದು, ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋಣಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ಅರ್ಜಿ ವಜಾ ಗೊಳಿಸಿದ್ದು, ದೆಹಲಿ ಪೊಲೀಸರು ತನಿಖೆ ನಡೆಸುತ್ತಿದೆ ಮತ್ತು ನ್ಯಾಯಾ ಲಯವು ತನಿಖೆಯನ್ನು ಮೇಲ್ವಿಚಾರಣೆ ಮಾಡುವುದಿಲ್ಲ ಎಂದು ಹೇಳಿದೆ.
ತನಿಖೆ ನಡೆಯುತ್ತಿರುವ ಸ್ಥಳಗಳಲ್ಲಿ ಮಾಧ್ಯಮಗಳು ಮತ್ತು ಸಾರ್ವಜನಿಕರ ಉಪಸ್ಥಿತಿಯು ಸಾಕ್ಷ್ಯಾಧಾರಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ತನಿಖೆಯನ್ನು ಸಿಬಿಐ ವಹಿಸಬೇಕು ಎಂದು ಮನವಿಯಲ್ಲಿ ಆರೋಪಿಸಲಾಗಿತ್ತು. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ದೆಹಲಿ ಪೊಲೀಸರು ಶೇ.80 ರಷ್ಟು ತನಿಖೆ ಪೂರ್ಣಗೊಂಡಿದೆ.
ಈ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರ ವಾದಕ್ಕೆ ಮನ್ನಣೆ ನೀಡಿದ್ದು, ಸಿಬಿಐ ಹಸ್ತಾಂತರಿಸುವ ಅರ್ಜಿಯನ್ನು ವಜಾಗೊಳಿಸಿದೆ.