Friday, 13th December 2024

ಜನವರಿ, ಫೆಬ್ರವರಿ ತಿಂಗಳಲ್ಲಿ ಸಿಬಿಎಸ್ಇ ಬೋರ್ಡ್ ಪರೀಕ್ಷೆ ನಡೆಯಲ್ಲ: ಪೋಖ್ರಿಯಾಲ್

ನವದೆಹಲಿ: ಮಂಗಳವಾರ 10 ಮತ್ತು 12ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳು 2021ರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

ಪ್ರಸ್ತುತ ಸನ್ನಿವೇಶವು ಪರೀಕ್ಷೆಗೆ ಪೂರಕವಲ್ಲ. ಹಾಗಾಗಿ ಪರೀಕ್ಷೆಗಳನ್ನ ನಡೆಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳ ಲಾಗುವುದು ಎಂದು ಹೇಳಿದ್ದಾರೆ.

ಡಿ.10ರಂದು ಶಿಕ್ಷಣ ಸಚಿವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಮುಂಬರುವ ಬೋರ್ಡ್ ಪರೀಕ್ಷೆಗಳ ನಡವಳಿಕೆಯ ಬಗ್ಗೆ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಮಂಡಳಿ ಪರೀಕ್ಷೆಗಳ ದಿನಾಂಕಗಳ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದರು.