Saturday, 14th December 2024

ಪೆಟ್ರೋಲ್‌, ಡೀಸೆಲ್ ದರದಲ್ಲಿ ಏರಿಳಿತ ಇಲ್ಲ

ನವದೆಹಲಿ: ಸರ್ಕಾರಿ ತೈಲ ಕಂಪನಿಗಳು, ಕಳೆದ ಮೂರು ದಿನಗಳಿಂದ ಪೆಟ್ರೋಲ್-ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದು ಕೊಂಡಿವೆ. ಜೂ.7ರಂದು ಪೆಟ್ರೋಲ್‌, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 96.72 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.62 ರೂಪಾಯಿ ಇದೆ. ಮುಂಬೈ ನಲ್ಲಿ ಲೀಟರ್ ಪೆಟ್ರೋಲ್ ದರ 111.35 ರೂ. ಹಾಗೂ ಲೀಟರ್ ಡೀಸೆಲ್ ದರ 97.28 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.24 ರೂಪಾಯಿ ಇದೆ.
ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.03 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 92.76 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 109.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.82 ರೂಪಾಯಿ ನಿಗದಿಯಾಗಿದೆ.
ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 107.40 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 96.23 ರೂಪಾಯಿ ನಿಗದಿ ಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.89 ರೂಪಾಯಿ ದಾಖಲಾಗಿದೆ.