Thursday, 12th December 2024

ಚುನಾವಣಾ ಪ್ರಚಾರವಿಲ್ಲ, ಸಣ್ಣ ಸಭೆಗಳಲ್ಲಿ 30 ನಿಮಿಷದ ಭಾಷಣ: ಮಮತಾ

ಕೋಲ್ಕತಾ: ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಇನ್ನು ಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ ಎಂದು ಟಿಎಂಸಿ ಹೇಳಿದೆ.

ಬಂಗಾಳ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಮಮತಾ ಬ್ಯಾನರ್ಜಿ, ತನ್ನ ಪಕ್ಷ ಕೋಲ್ಕತಾದಲ್ಲಿ ಸಣ್ಣ ಸಭೆಗಳನ್ನು ನಡೆಸಲಿದೆ. ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಕಿರು ಭಾಷಣಗಳನ್ನು ಮಾಡುವೆ ಎಂದು ಹೇಳಿದರು.

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಿಯಾನ್, ‘ಬ್ಯಾನರ್ಜಿ ಇನ್ನು ಮುಂದೆ ಕೋಲ್ಕತಾದಲ್ಲಿ ಚುನಾವಣಾ ಪ್ರಚಾರ ನಡೆಸು ವುದಿಲ್ಲ. ರಾಜಧಾನಿಯಲ್ಲಿ ನಡೆಯುವ ಪ್ರಚಾರದ ಕೊನೆಯ ದಿನ ಎ26ರಂದು ಸಾಂಕೇತಿಕವಾಗಿ ಸಭೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ. ಸೋಂಕು ಹಿನ್ನಲೆಯಲ್ಲಿ ನಿಗದಿಯಾಗಿರುವ ಪ್ರಚಾರ ಸಮಯವನ್ನು ಕಡಿತಗೊಳಿಸಲಾಗಿದ್ದು, ಮಮತಾ ಬ್ಯಾನರ್ಜಿ ಅವರ ಪ್ರಚಾರ ಸಮಯವನ್ನು ಕೇವಲ 30 ನಿಮಿಷಕ್ಕೆ ನಿರ್ಬಂಧಿಸಲಾಗಿದೆ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಐದು ಹಂತಗಳು ಪೂರ್ಣಗೊಂಡಿದ್ದು, ಮೇ 2 ರಂದು ಫಲಿತಾಂಶ ಹೊರಬೀಳಲಿದೆ.