ನವದೆಹಲಿ : ಕೆನಡಾ ಸರ್ಕಾರವು 30 ದಿನಗಳ ಕಾಲ ಭಾರತದ ಎಲ್ಲ ಪ್ರಯಾಣಿಕ ವಿಮಾನಗಳನ್ನು ಸ್ಥಗಿತಗೊಳಿಸಿದೆ. ಭಾರತ ಮತ್ತು ಪಾಕಿಸ್ತಾನದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ.
ಭಾರತ ಮತ್ತು ಪಾಕಿಸ್ತಾನದಿಂದ ಬರುವ ಪ್ರಯಾಣಿಕರಲ್ಲಿ ಹೆಚ್ಚು ಸಂಖ್ಯೆಯಲ್ಲಿ ಕರೋನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ 30 ದಿನಗಳ ವರೆಗೆ ವಿಮಾನಗಳನ್ನು ರದ್ದು ಮಾಡಿರುವುದಾಗಿ ಕೆನಡಾ ಸಾರಿಗೆ ಸಚಿವ ಪ್ರಕಟಿಸಿದ್ದಾರೆ.
ಕೆನಡಾಕ್ಕೆ ಭಾರತ ಮತ್ತು ಪಾಕಿಸ್ತಾನದಿಂದ ಆಗಮಿಸುವ ಎಲ್ಲ ವಾಣಿಜ್ಯ ಮತ್ತು ಖಾಸಗಿ ಪ್ರಯಾಣಿಕರ ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, ಇದೊಂದು ತಾತ್ಕಾಲಿಕ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.