ಆಯೋಗ ವಿಧಿಸಿರುವ ಈ ನಿಷೇಧ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಜಾರಿಯಲ್ಲಿರಲಿದೆ. ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ ಅಜಯ್ ಕುಮಾರ್ ಶುಕ್ಲಾ ಅವರು ಹೊರಡಿಸಿದ ಹೇಳಿಕೆಯಲ್ಲಿ, ಫೆಬ್ರವರಿ 10 ರಂದು ಬೆಳಿಗ್ಗೆ 7 ರಿಂದ ಮಾರ್ಚ್ 7 ರ ಸಂಜೆ 6.30 ರವರೆಗೆ ಯುಪಿ ವಿಧಾನಸಭಾ ಚುನಾವಣೆಯ ಎಕ್ಸಿಟ್ ಪೋಲ್ ಗಳನ್ನು ನಿಷೇಧಿಸಲಾಗುವುದು ಎಂದು ಹೇಳಲಾಗಿದೆ.
ಉತ್ತರ ಪ್ರದೇಶದಲ್ಲಿ ಈ ಬಾರಿ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಫೆಬ್ರವರಿ 10ರಂದು ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ 58 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಹೇಳಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಅಭಿಪ್ರಾಯ ಸಂಗ್ರಹಗಳನ್ನು ನಿಲ್ಲಿಸುವಂತೆ ಸಮಾಜ ವಾದಿ ಪಕ್ಷ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಎಸ್‌ಪಿ ಅಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಅವರು ಜ.23 ರಂದು ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು ವಿವಿಧ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಅಭಿಪ್ರಾಯ ಸಂಗ್ರಹಗಳ ಪ್ರಸಾರವನ್ನು ತಕ್ಷಣವೇ ನಿಷೇಧಿಸ ಬೇಕೆಂದು ಒತ್ತಾಯಿಸಿದ್ದರು