Wednesday, 11th December 2024

ಡಿ.31ರವರೆಗೆ ಲಂಡನ್‌ನಿಂದ ಭಾರತಕ್ಕೆ ವಿಮಾನಗಳ ಹಾರಾಟ ಬಂದ್

ನವದೆಹಲಿ: ಲಂಡನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಇದೇ ಡಿ.22ರಿಂದ ಡಿ. 31ರ ತನಕ ರದ್ದು ಮಾಡಿ ಆದೇಶ ಹೊರಡಿಸಿದೆ.

ಭಾರತಕ್ಕೆ ಬರುವ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಅಂತ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಕೊರೊನಾ ವೈರಸ್ ನ ಹೊಸ ರೋಗ ಕುರಿತು ಕೇಂದ್ರ ಸರ್ಕಾರವು ಕಟ್ಟೆಚ್ಚರ ವಹಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಹೇಳಿದ್ದಾರೆ. ಲಂಡನ್‌ನಲ್ಲಿ ಕೊರೊನಾ ವೈರಸ್ ನ ಹೊಸ ತಳಿಯನ್ನು ಕಂಡು ಹಿಡಿದಿರುವುದರಿಂದ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ದೆಹಲಿ ಸಿಎಂ ಲಂಡನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟ ರದ್ದು ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.