Saturday, 14th December 2024

ಯುಪಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ರಜೆ ಇಲ್ಲ

ಲಕ್ನೋ: ಉತ್ತರಪ್ರದೇಶದಲ್ಲಿ ಮೊದಲ ಬಾರಿಗೆ ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಸರ್ಕಾರ, ಸರ್ಕಾರೇತರ ಕಚೇರಿಗಳು ಮತ್ತು ಮುಖ್ಯವಾಗಿ ಮಾರುಕಟ್ಟೆಗಳು ಸ್ವಾತಂತ್ರ್ಯ ದಿನದಂದು ತೆರೆದಿರುತ್ತವೆ. ಅಂದರೆ, ಯುಪಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ರಜೆ ಇಲ್ಲ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿ ಜಿಲ್ಲೆಯಲ್ಲೂ ಈ ವರ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷ ಕಾರ್ಯಕ್ರಮವಾಗಿ ಆಚರಿಸಲಾಗುವುದು ಎಂದು ಹೇಳಿದ್ದಾರೆ.

“ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಹೆಚ್ಚು ಸ್ಥಳಗಳಲ್ಲಿ ಕಾರ್ಯಕ್ರಮಗಳು ನಡೆಯ ಬೇಕು. ಸ್ವಾತಂತ್ರ್ಯೋತ್ಸವ ಸಪ್ತಾಹದಲ್ಲಿ ವಾರದ ಪ್ರತಿ ದಿನವೂ ವಿಭಿನ್ನ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಬೇಕು. ಜನರು ಇದರಲ್ಲಿ ಭಾಗವಹಿಸಬೇಕು. ಎಲ್ಲಾ ವರ್ಗದ ಜನರು ಸಾಮಾಜಿಕ ಸಂಸ್ಥೆಗಳು, ಸಾರ್ವಜನಿಕ ಪ್ರತಿನಿಧಿಗಳು ಮತ್ತು ವ್ಯಾಪಾರ ಸಂಸ್ಥೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ಹೇಳಿದರು.

ಕಳೆದ ಎರಡು ವರ್ಷಗಳಿಂದ ದೇಶದ ಶಾಲಾ-ಕಾಲೇಜುಗಳು ವಿಶ್ವವಿದ್ಯಾನಿಲಯಗಳು, ಸರ್ಕಾರ, ಸರ್ಕಾರೇತರ ಕಚೇರಿಗಳನ್ನು ಬಂದ್ ಮಾಡಲಾಗಿತ್ತು. ಎರಡು ವರ್ಷದ ಬಳಿಕ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ ಗಳೊಂದಿಗೆ, ಕಚೇರಿಗಳಲ್ಲಿ ಸಿಬ್ಬಂದಿಯೊಂದಿಗೆ ಆಚರಿಸಲಾಗುತ್ತಿದೆ.