Thursday, 19th September 2024

ಡಿ.31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ಇಲ್ಲ

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಾರತ ಸರ್ಕಾರ ಮುಂಜಾಗೃತಾ ಕ್ರಮವಾಗಿ  ಡಿಸೆಂಬರ್ 31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ನಿಷೇಧಿಸಿದೆ.

ಹೀಗಾಗಿ ವರ್ಷಾಂತ್ಯದವರೆಗೆ ಭಾರತದಿಂದ ಹಾಗೂ ಭಾರತಕ್ಕೆ ಯಾವುದೇ ವಿಮಾನಗಳ ಹಾರಾಟ ಇರುವುದಿಲ್ಲ. ಬದಲಾಗಿ ಆಯ್ದ ಕೆಲವೇ ಮಾರ್ಗಗಳಲ್ಲಿ ಮಾತ್ರ ವಿಮಾನಗಳು ಹಾರಾಟ ನಡೆಸಲಿವೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.

ಈ ನಿರ್ಬಂಧಗಳು ಅಂತರಾಷ್ಟ್ರೀಯ ಆಲ್​-ಕಾರ್ಗೋ ಕಾರ್ಯಾಚರಣೆಗಳು ಮತ್ತು ಡಿಜಿಸಿಎ ವಿಶೇಷವಾಗಿ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ. ನಾಗರಿಕ ವಿಮಾನಯಾನ ನಿರ್ದೇಶಾನಲಯವು ನವೆಂಬರ್ 30ರವರೆಗೆ ಅಂತರಾಷ್ಟ್ರೀಯ ವಿಮಾನಯಾನ ಹಾರಾಟಕ್ಕೆ ನಿರ್ಬಂಧ ಹೇರಿತ್ತು. ಈಗ ಈ ಅವಧಿಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದ್ದು, ವಿಮಾನಗಳ ಹಾರಾಟ ಇರುವುದಿಲ್ಲ.

ಆಯ್ದ ಕೆಲವೇ ಮಾರ್ಗಗಳಲ್ಲಿ ಮಾತ್ರ ವಿಮಾನಗಳು ಹಾರಾಟ ನಡೆಸಲಿವೆ. ಆದರೆ ವಿಶೇಷ ಅಂತರಾಷ್ಟ್ರೀಯ ವಿಮಾನಗಳು ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್​ನಡಿ ಕಾರ್ಯಾಚರಣೆ ನಡೆಸುತ್ತಿವೆ.

Leave a Reply

Your email address will not be published. Required fields are marked *