Sunday, 15th December 2024

ಜನವರಿ 31ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ

ನವದೆಹಲಿ: ಬ್ರಿಟನ್‌ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನ ನಿಷೇಧವನ್ನ ಜನವರಿ 31ರವರೆಗೆ ವಿಸ್ತರಿಸಲಾಗಿದೆ.

ಇನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಆದೇಶವನ್ನ ಪರಿಷ್ಕರಿಸಿದ್ದು, ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನ ಜನವರಿ 31ರವರೆಗೆ ರದ್ದು ಮಾಡಲಾಗುವುದು ಎಂದು ಸ್ಪಷ್ಟಪಡಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿದ ಸಚಿವಾಲಯ, ‘ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು 2021ರ ಜನವರಿ 31ರವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ’ ಎಂದು ತಿಳಿಸಿದೆ.

ಆದಾಗ್ಯೂ, ವಿಶೇಷ ವಿಮಾನಹಾರಾಟ ಮತ್ತು ಅಂತಾರಾಷ್ಟ್ರೀಯ ಏರ್ ಕಾರ್ಗೋ ಕಾರ್ಯಾಚರಣೆಗಳಿಗೆ ಈ ನಿರ್ಬಂಧಗಳು ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.