Thursday, 30th November 2023

ಡೆಂಘೀ ಪ್ರಕರಣ ಹೆಚ್ಚಳ: ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳಿಗೆ ರಜೆ ಇಲ್ಲ

ಲಖನೌ: ಹಲವು ನಗರಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿ ಸಿದ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ರಜೆಯನ್ನು ಅನುಮೋದಿಸದಿರಲು ಸೂಚಿಸಲಾಗಿದೆ.

ಡೆಂಘೀ ಹಾವಳಿ ಮತ್ತು ಮುಂಬರುವ ಹಬ್ಬ ಹರಿದಿನಗಳ ಹಿನ್ನೆಲೆಯಲ್ಲಿ ವೈದ್ಯಕೀಯ ಆರೋಗ್ಯ ಕಚೇರಿಯ ಮಹಾ ನಿರ್ದೇ ಶಕರು (ಡಿಜಿ) ಈ ಆದೇಶ ಹೊರಡಿಸಿದ್ದಾರೆ.

ಅನಿವಾರ್ಯವಲ್ಲದ ಹೊರತು ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ರಜೆ ನೀಡಬಾರದು ಎಂದು ಮುಖ್ಯ ವೈದ್ಯಾಧಿ ಕಾರಿಗಳು, ಹೆಚ್ಚುವರಿ ನಿರ್ದೇಶಕರು ಮತ್ತು ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಡಿಜಿ ಸೂಚನೆಯನ್ನು ನೀಡಿದ್ದಾರೆ.

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಜ್ವರದ ಬಗ್ಗೆ ದೂರು ನೀಡುವ ರೋಗಿ ಗಳನ್ನು ನಿರ್ವಹಿಸಲು ಮೀಸಲಾದ ಡೆಸ್ಕ್‌ಗಳನ್ನು ಸ್ಥಾಪಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರೋಗಿಗಳಿಗೆ ಅವರ ಅಗತ್ಯಕ್ಕೆ ಅನುಗುಣವಾಗಿ ಏಳರಿಂದ 15 ದಿನಗಳ ಔಷಧಿಗಳನ್ನು ಒದಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯದಲ್ಲಿ ಕಡಿಮೆ ಪ್ರಮಾಣದಲ್ಲಿ ಪ್ರಕರಣಗಳು ವರದಿಯಾಗುತ್ತಿವೆ ಎಂದು ತಿಳಿಸಿದರು. ಆಸ್ಪತ್ರೆಗಳಲ್ಲಿ ಪ್ರಕರಣಗಳಿಗೆ ಬೆಡ್‌ಗಳನ್ನು ಮೀಸಲಿಟ್ಟಿದ್ದು, ಸೊಳ್ಳೆಗಳಿಂದ ಹರಡುವ ರೋಗ ಹರಡದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

error: Content is protected !!