ಬೆಂಗಳೂರು: ಕೊರೋನಾ ನಿಯಂತ್ರಣ ಸಂಬಂಧ ಜಾರಿಗೊಳಿಸಿದ ನಿರ್ಬಂಧಗಳನ್ನು ಸಾಕಷ್ಟು ಸಡಿಲಗೊಳಿಸಲಾಗಿದ್ದು, ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.
ಈಗ ಜಾರಿಯಲ್ಲಿರುವ ಅನ್’ಲಾಕ್ 5 ಅನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದ್ದು, ಹೊಸ ಮಾರ್ಗಸೂಚಿ ಹೊರಡಿಸುವು ದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ದೇಶಾದ್ಯಂತ ಕಂಟೈನ್ಮೆಂಟ್ ಝೋನ್‌ಗಳಲ್ಲಿ ಲಾಕ್ ಡೌನ್ ನವೆಂಬರ್ 30ರ ತನಕ ಮುಂದುವರೆಯಲಿದೆ. ಉಳಿದ ಪ್ರದೇಶಗಳಲ್ಲಿ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಪ್ರಕಟಿಸಿದ ನಿಯಮಗಳು ಜಾರಿಯಲ್ಲಿರುತ್ತವೆ. ಅನ್ ಲಾಕ್ 5 ಮಾರ್ಗಸೂಚಿಯಲ್ಲಿ ಚಿತ್ರ ಮಂದಿರ, ಈಜುಕೊಳ, ಕ್ರೀಡಾ ತರಬೇತಿ, ಮನೋರಂಜನಾ ಪಾರ್ಕ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು.