Saturday, 14th December 2024

ಬನಾರಸ್ ಹಿಂದೂ ವಿವಿಗೆ ಸಂದರ್ಶಕ ಪ್ರಾಧ್ಯಾಪಕಿಯಾಗಿ ಶ್ರೀಮತಿ ಅಂಬಾನಿ ಪ್ರಸ್ತಾಪ ಅಲ್ಲಗಳೆದ ರಿಲಾಯನ್ಸ್

ಮುಂಬೈ: ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಉದ್ಯಮಿ ಮುಕೇಶ್ ಅಂಬಾನಿ ಪತ್ನಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕಿ ನೀತಾ ಅಂಬಾನಿಯನ್ನು ಸಂದರ್ಶಕ ಪ್ರಾಧ್ಯಾಪಕರನ್ನಾಗಿ ಮಾಡುವ ಪ್ರಸ್ತಾಪವಿರುವ ವರದಿಗಳು ಸುಳ್ಳು ಎಂದು ರಿಲಯನ್ಸ್ ಬುಧವಾರ ಹೇಳಿದೆ.

ಸುದ್ದಿ ಸುಳ್ಳು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ವಕ್ತಾರರು ತಿಳಿಸಿದ್ದಾರೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಸಂದರ್ಶಕ ಪ್ರಾಧ್ಯಾಪಕರನ್ನಾಗಿ ಮಾಡುವ ಯಾವುದೇ ಪ್ರಸ್ತಾವ ಅಥವಾ ಆಹ್ವಾನ ಬಂದಿಲ್ಲ ಎಂದು ಅವರು ಹೇಳಿದರು.

ಪ್ರಸ್ತಾವಕ್ಕೆ ವಿರೋಧಿಸಿ ಮಂಗಳವಾರ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು.