Wednesday, 11th December 2024

ಬಿಆರ್‌ಎಸ್ ನಾಯಕಿ ಕೆ.ಕವಿತಾಗೆ ಜಾಮೀನು ನಿರಾಕರಣೆ

ವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನದಲ್ಲಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ವಿಭಾಗೀಯ ಪೀಠವು ಕವಿತಾ ಅವರಿಗೆ ವಿಚಾ ರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸೂಚಿಸಿದೆ.

ಇದು ಈ ನ್ಯಾಯಾಲಯವು ಅನುಸರಿಸುತ್ತಿರುವ ಕ್ರಮ. ಶಿಷ್ಟಾಚಾರ ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳನ್ನು ಪ್ರಶ್ನಿಸಿ ಕವಿತಾ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ನ್ಯಾಯಾ ಲಯವು ಇ.ಡಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ, 6 ವಾರಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಮಾ.15 ರಂದು ಬಂಧಿಸಲಾಗಿತ್ತು. ಬಳಿಕ ಮಾ.23 ರವರೆಗೆ ಇ.ಡಿ ಕಸ್ಟಡಿಗೆ ನೀಡಲಾಗಿದೆ. ಇ.ಡಿ ಬಂಧನ ಪ್ರಶ್ನಿಸಿ ಕವಿತಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.