ಮೃತಪಟ್ಟಿದ್ದಾರೆ.
ನೂರಾರು ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ. ರೈತರ ಬೆಳೆಯೂ ಹಾಳಾಗಿದೆ. ವಿವಿಧೆಡೆ ಭೂಕುಸಿತದಿಂದಾಗಿ ಹಲವು ರಸ್ತೆಗಳು ಬಂದ್ ಆಗಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದೆ.
ಧಾರಾಕಾರ ಮಳೆ ಹಿನ್ನೆಲೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಸೋಮವಾರ ಸಂಜೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಹಿಮಾಚಲದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಂತಹ ಮಳೆ ಸುರಿದಿರಲಿಲ್ಲ.. ಇದರಲ್ಲಿ 50 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ.
ಮಳೆಯಿಂದಾದ ದುರಂತಗಳ ಹಿನ್ನೆಲೆ ಸ್ವಾತಂತ್ರ್ಯ ದಿನಾಚರಣೆಯಂದು ನಡೆಯಬೇಕಿದ್ದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ರದ್ದುಗೊಳಿಸಲಾಗಿದೆ.
ಪೊಲೀಸ್ ಮತ್ತು ಎಸ್ಡಿಆರ್ಎಫ್ ಅಥವಾ ಪರೇಡ್ನಲ್ಲಿ ಭಾಗವಹಿಸುವ ಇತರ ತುಕಡಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯ ದಲ್ಲಿ ತೊಡಗಿರುತ್ತವೆ. ಈ ಬಾರಿ ಹಿಮಾಚಲದಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯಿಂದ ಚೇತರಿಸಿಕೊಳ್ಳಲು ಸಮಯ ಹಿಡಿಯಲಿದೆ ಎಂದು ಸಿಎಂ ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯದ ಸಿಎಂ ಸುಖವಿಂದರ್ ಸಿಂಗ್ ಸುಖು ಅವರೊಂದಿಗೆ ಫೋನ್ ಮೂಲಕ ಮಾತನಾಡಿದರು.