ನವದೆಹಲಿ: ರೂ.500 ಹಾಗೂ 1000 ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಂಡಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಜನವರಿ 2ರಂದು ಈ ಕುರಿತ ತೀರ್ಪು ಪ್ರಕಟಿಸಲಿದೆ ಎಂದು ವರದಿಯಾಗಿದೆ.