Sunday, 8th September 2024

ನೋಟ್ ಬ್ಯಾನ್ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

ನವದೆಹಲಿ: ಒಂದು ಸಾವಿರ ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ 2016ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ, ಸುಪ್ರೀಂ ಕೋರ್ಟ್‌ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಸೋಮವಾರ ತೀರ್ಪು ಪ್ರಕಟಿಸಿದೆ.

ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದಿದೆ.

ನೋಟು ಬದಲಾಯಿಸಲು ನೀಡಿದ ಕಾಲಾವಕಾಶ ಸರಿಯಾಗಿದೆ. ನೋಟು ಅಮಾನ್ಯಗೊಳಿಸಿದ ಸಂದರ್ಭ ಆರ್ ಬಿಐ, ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿತ್ತು. ಇಂತಹ ಕ್ರಮವನ್ನು ತರಲು ಸಮಂಜಸವಾದ ಸಂಬಂಧವಿತ್ತು ಎಂದು ಹೇಳಿದೆ.

error: Content is protected !!