ನವದೆಹಲಿ: ತಮಿಳುನಾಡು ಸರ್ಕಾರ ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠೆ ಕಾರ್ಯ ಕ್ರಮಗಳ ನೇರ ಪ್ರಸಾರವನ್ನು ನಿಷೇಧಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ.
ಈ ಕುರಿತು ಟ್ಟೀಟ್ ಮಾಡಿರುವ ಅವರು, ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ನೇರ ಪ್ರಸಾರವನ್ನು ವೀಕ್ಷಿಸುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನಲ್ಲಿ ಶ್ರೀರಾಮನಿಗೆ 200 ಕ್ಕೂ ಹೆಚ್ಚು ದೇವಾಲಯಗಳಿದ್ದು, ಅಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ, ಭಜನೆ, ಪ್ರಸಾದ, ಅನ್ನದಾನ ವನ್ನು ಅನುಮತಿಸುತ್ತಿಲ್ಲ. ಖಾಸಗಿ ದೇವಸ್ಥಾನಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಪೊಲೀಸರು ತಡೆಯುತ್ತಿದ್ದಾರೆ. ಪಂಗಡಗಳನ್ನು ಕಿತ್ತು ಹಾಕುತ್ತೇವೆ ಎಂದು ಸಂಘಟಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೂ ವಿರೋಧಿ, ಇಂತಹ ದ್ವೇಷಪೂರಿತ ಕ್ರಮವನ್ನು ಖಂಡಿಸುತ್ತೇನೆ.. ಎಂದು ಕಿಡಿಕಾರಿದ್ದಾರೆ.