Thursday, 12th December 2024

ತಮಿಳುನಾಡಿನಲ್ಲಿ ರಾಮಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಠೆ ನೇರ ಪ್ರಸಾರಕ್ಕೆ ನಿಷೇಧ: ಕೇಂದ್ರ ಸಚಿವೆ ಆರೋಪ

ನವದೆಹಲಿ: ತಮಿಳುನಾಡು ಸರ್ಕಾರ ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠೆ ಕಾರ್ಯ ಕ್ರಮಗಳ ನೇರ ಪ್ರಸಾರವನ್ನು ನಿಷೇಧಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ.

ಈ ಕುರಿತು ಟ್ಟೀಟ್‌ ಮಾಡಿರುವ ಅವರು, ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ನೇರ ಪ್ರಸಾರವನ್ನು ವೀಕ್ಷಿಸುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.