Saturday, 14th December 2024

NPS Vatsalya Scheme: ಇಂದು ಅನಾವರಣಗೊಳ್ಳಲಿದೆ ಎನ್‌ಪಿಎಸ್ ವಾತ್ಸಲ್ಯ ಯೋಜನೆ; ಏನಿದರ ಪ್ರಯೋಜನ?

NPS Vatsalya Scheme

ಎನ್‌ಪಿಎಸ್ ವಾತ್ಸಲ್ಯ ಯೋಜನೆಯನ್ನು (NPS Vatsalya Scheme) 2024-25ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ (Finance Minister) ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಘೋಷಿಸಿದ್ದು, ಬುಧವಾರ ಇದನ್ನು ಅನಾವರಣಗೊಳಿಸಲಿದ್ದಾರೆ. ಪೋಷಕರು ತಮ್ಮ ಮಕ್ಕಳ ಹೆಸರಿನಲ್ಲಿ ಪಿಂಚಣಿ ಖಾತೆಗಳನ್ನು ತೆರೆಯಲು ಸಹಾಯ ಮಾಡುವ ಎನ್‌ಪಿಎಸ್ ವಾತ್ಸಲ್ಯ ಯೋಜನೆಯ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

ಎನ್‌ಪಿಎಸ್ ವಾತ್ಸಲ್ಯ ಯೋಜನೆ ಎಂದರೇನು?

ಪೋಷಕರು ತಮ್ಮ ಮಕ್ಕಳ ಹೆಸರಿನಲ್ಲಿ ಪಿಂಚಣಿ ಖಾತೆಗಳನ್ನು ತೆರೆದು ಅದರಲ್ಲಿ ಹೂಡಿಕೆ ಮಾಡಲು ಅನುವು ಮಾಡಿಕೊಡುತ್ತದೆ ಈ ಎನ್‌ಪಿಎಸ್ ವಾತ್ಸಲ್ಯ ಯೋಜನೆ. ಈ ಮೂಲಕ ದೀರ್ಘಾವಧಿಯ ಹೂಡಿಕೆಗೆ ಮತ್ತು ಮಕ್ಕಳ ಭವಿಷ್ಯವನ್ನು ಭದ್ರಪಡಿಸಲು ಅವಕಾಶ ಮಾಡಿಕೊಡುವ ಗುರಿಯನ್ನು ಇದು ಹೊಂದಿದೆ.

ಈ ಯೋಜನೆಯ ಪ್ರಯೋಜನ ಪಡೆಯಲು ಆನ್‌ಲೈನ್ ವೇದಿಕೆಯನ್ನು ಹಣಕಾಸು ಸಚಿವರು ಬುಧವಾರ ಅನಾವರಣಗೊಳಿಸಿ, ಅಧಿಕೃತ ಕರಪತ್ರವನ್ನು ಬಿಡುಗಡೆ ಮಾಡಲಿದ್ದಾರೆ. ಸಣ್ಣ ಚಂದಾದಾರರಿಗೆ ಶಾಶ್ವತ ನಿವೃತ್ತಿ ಖಾತೆ ಸಂಖ್ಯೆ (PRAN) ಕಾರ್ಡ್‌ಗಳನ್ನು ವಿತರಿಸಲಿದ್ದಾರೆ. ಈ ಯೋಜನೆಯಲ್ಲಿ ಅಪ್ರಾಪ್ತ ವಯಸ್ಕರು 18 ವರ್ಷ ತುಂಬಿದ ಅನಂತರ ಖಾತೆಯನ್ನು ಸಾಮಾನ್ಯ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಖಾತೆಯಾಗಿ ಪರಿವರ್ತಿಸಲು ಅವಕಾಶವಿದೆ.

NPS Vatsalya Scheme

ಯಾರು ಅರ್ಹರು?

ಪಾಲಕರು, ಪೋಷಕರು, ಎನ್ ಆರ್ ಐಗಳು ತಮ್ಮ ಅಪ್ರಾಪ್ತ ವಯಸ್ಕ ಮಕ್ಕಳ ಹೆಸರಿನಲ್ಲಿ ಎನ್ ಪಿ ಎಸ್ ವಾತ್ಸಲ್ಯ ಖಾತೆಗಳನ್ನು ತೆರೆಯಲು ಅವಕಾಶವಿದೆ. ಇದು ಸಣ್ಣ ವಯಸ್ಸಿನಲ್ಲೇ ಹೂಡಿಕೆಗೆ ಮಕ್ಕಳಿಗೆ ಪ್ರೇರೇಪಿಸುತ್ತದೆ ಮತ್ತು ಕಾಲಾನಂತರದಲ್ಲಿ ಆದಾಯವನ್ನು ಹೆಚ್ಚಿಸುತ್ತದೆ. ಈ ಯೋಜನೆಯಲ್ಲಿ ತಿಂಗಳಿಗೆ ಕನಿಷ್ಠ 500 ರೂ. ಅಥವಾ ವಾರ್ಷಿಕವಾಗಿ 6,000 ರೂ. ಹೂಡಿಕೆ ಮಾಡಬಹುದು.

ದೇಶಾದ್ಯಂತ ಏಕಕಾಲದಲ್ಲಿ ಸುಮಾರು 75 ಸ್ಥಳಗಳಲ್ಲಿ ಈ ಯೋಜನೆಯ ಅನಾವರಣ ಕಾರ್ಯಕ್ರಮಗಳು ನಡೆಯಲಿದೆ. ಹಲವು ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಅನ್ನು ಆಯೋಜಿಸಿ, ಅಪ್ರಾಪ್ತ ವಯಸ್ಕರಿಗೆ ಶಾಶ್ವತ ನಿವೃತ್ತಿ ಖಾತೆ ಸಂಖ್ಯೆ ಕಾರ್ಡ್‌ಗಳನ್ನು ವಿತರಿಸಲಾಗುತ್ತದೆ.

Kolkata doctors protest: ಡಾಕ್ಟರ್ಸ್‌ ಡಿಮ್ಯಾಂಡ್‌ಗೆ ಮಣಿದ ದೀದಿ; ಕಮಿಷನರ್‌ ಸೇರಿ ಸರ್ಕಾರಿ ಅಧಿಕಾರಿಗಳ ಎತ್ತಂಗಡಿ

ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (PFRDA) ಎನ್ ಪಿಎಸ್ ವಾತ್ಸಲ್ಯ ಯೋಜನೆಯನ್ನು ನಿರ್ವಹಿಸಲಿದೆ. ಮಕ್ಕಳಿಗೆ ಆರಂಭಿಕ ಹಣಕಾಸು ಯೋಜನೆಯನ್ನು ಪ್ರೋತ್ಸಾಹಿಸಲು ಮತ್ತು ಅವರ ಆರ್ಥಿಕ ಭವಿಷ್ಯವನ್ನು ಸುರಕ್ಷಿತಗೊಳಿಸಲು ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ.