ಬಳಿಕ ದೇಶಾದ್ಯಂತ ಭಾರೀ ಪ್ರತಿಭಟನೆಯೂ ನಡೆದಿತ್ತು. ಅಲ್ಲದೇ ಹಲವು ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಬೆನ್ನಲ್ಲೇ ಬಿಜೆಪಿ ಕೂಡಾ ಇವರನ್ನು ಪಕ್ಷದಿಂದ ಹೊರಹಾಕುವ ನಿರ್ಧಾರ ಮಾಡಿತ್ತು.
ನೂಪುರ್ ಶರ್ಮ ವಿರುದ್ಧ ಈಗಾಗಲೇ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ ಸುಪ್ರೀಂ ಕೋರ್ಟ್ ಈ ಎಲ್ಲಾ ಪ್ರಕರಣಗಳನ್ನು ದೆಹಲಿ ಹೈಕೋರ್ಟ್ ನಲ್ಲಿಯೇ ವಿಚಾರಣೆ ನಡೆಸುವುದಾಗಿ ಹೇಳಿದೆ.
ಹಲವು ರಾಷ್ಟ್ರಗಳು ನೂಪೂರ್ ಶರ್ಮಾ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದವು. ವಿವಾದ ಉಲ್ಬಣಗೊಂಡ ನಂತರ ನೂಪುರ್ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ.