Sunday, 28th April 2024

ಒಎಸ್‌ಆರ್‌ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

ಗಂಜಾಂ​ (ಒಡಿಶಾ): ಒಡಿಶಾದ ಗಂಜಾಂನಲ್ಲಿ ಒಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ಜನ ಪ್ರಯಾಣಿಕರು ಸಾವನ್ನಪ್ಪಿದ್ದರು.

6 ಜನ ಗಂಭೀರವಾಗಿ ಗಾಯಗೊಂಡಿದ್ದರು. ಅದರಲ್ಲಿ ಮತ್ತೆ ಇಬ್ಬರು ಚಿಕಿತ್ಸೆ ಫಲಿಸದೆ ಸಾವ ನ್ನಪ್ಪಿದ್ದು, ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಗಂಜಾಂ ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾ ಪ್ರದೇಶದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಮೃತರನ್ನು ರಮೇಶ್ ಪ್ರಧಾನ್ (62), ಸೀತಾರಾಮ್ ಪ್ರಧಾನ್ (60), ಸಂಜಯ್ ಮೇದಿನ್ ರೇ (50), ತ್ರಿಪತಿ ಪ್ರಧಾನ್, ಆಯುಷ್, ಸಂಗೀತಾ ಡಾಕುವಾ (25), ಸುಗ್ಯಾನಿ (27), ಸಿಬಾನಿ ಪ್ರಧಾನ್ (27), ಲಿತು ನಾಯಕ್ (40), ದೆಬನ್ಸು ಪ್ರಧಾನ್ (2 ವರ್ಷ), ಅಲೋಕ್ ಪ್ರಧಾನ್ (14), ಸುವೆಂದು ಪ್ರಧಾನ್ (32) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಗಂಜಾಂ ಜಿಲ್ಲೆಯ ನಿವಾಸಿಗಳು ಎಂದು ತಿಳಿದು ಬಂದಿದೆ.

ರಾಯಗಢ ಜಿಲ್ಲೆಯ ಗುಡಾರಿ ಪ್ರದೇಶದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (OSRTC) ಬಸ್ ಹಾಗೂ ಬೆರ್ಹಾಮ್‌ಪುರ ಪ್ರದೇಶದ ಖಂಡೇಲಿ ಗ್ರಾಮದಲ್ಲಿ ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ ಹೊಡೆದಿವೆ. ಗಾಯಾಳುಗಳನ್ನು ಸ್ಥಳೀಯ ಬ್ರಹ್ಮಪುರದ ಎಂಕೆಸಿಜೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲ ಖಾಸಗಿ ಬಸ್​ನ ಪ್ರಯಾಣಿಕರಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಂಜಾಂ ಜಿಲ್ಲಾಧಿಕಾರಿ ದಿಬ್ಯಜ್ಯೋತ್ ಪರಿದಾ, ಬ್ರಹ್ಮಪುರ ಎಸ್ಪಿ ಡಾ ಶ್ರವಣ್​ ವಿವೇಕ್ ಎಂ ಮತ್ತು ಬ್ರಹ್ಮಪುರ ಉಪಜಿಲ್ಲಾಧಿಕಾರಿ ಅಶುತೋಷ್ ಕುಲಕರ್ಣಿ ಅವರು ಬ್ರಹ್ಮಪುರ ಎಂಕೆಸಿಜಿ ವೈದ್ಯಕೀಯ ಕೇಂದ್ರಕ್ಕೆ ಭೇಟಿ ನೀಡಿ ಗಾಯಾಳುಗಳ ಚಿಕಿತ್ಸೆ ಮತ್ತು ಇತರ ವ್ಯವಸ್ಥೆಗಳ ಬಗ್ಗೆ ವಿಚಾರಿಸಿ ದರು.

ಒಡಿಶಾ ಸರ್ಕಾರವು ಗಂಜಾಂನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ತಲಾ ರೂ 30,000 ಪರಿಹಾರ ಘೋಷಿಸಿದೆ.

Leave a Reply

Your email address will not be published. Required fields are marked *

error: Content is protected !!