Thursday, 12th December 2024

ಭೀಕರ ಅಪಘಾತ: 8 ಮಂದಿ ಸಾವು

ಕಿಯೋಂಜಾರ್: ಒಡಿಶಾದ ಕಿಯೋಂಜಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 8 ಮಂದಿ ಮಂದಿ ಸಾವನ್ನಪ್ಪಿ 12 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಪ್ರಯಾಣಿಕರನ್ನು ತುಂಬಿದ್ದ ವ್ಯಾನ್ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊದಮರಿ ಗ್ರಾಮದ 20 ಮಂದಿ ಜಿಲ್ಲೆಯ ಮಾ ತಾರಿಣಿ ದೇವಸ್ಥಾನಕ್ಕೆ ವ್ಯಾನ್ನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ಪೈಕಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಘಾಟಗಾಂವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಆರಂಭದಲ್ಲಿ ಗಾಯಾಳುಗಳನ್ನು ಘಾಟ್ಗಾಂವ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ನಂತರ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಯಿತು.

ಈ ಅವಘಡ ಎಷ್ಟು ಭೀಕರವಾಗಿತ್ತೆಂದರೆ ವ್ಯಾನ್ ಹಾರಿ ಹೋಗಿ, ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾವನ್ನಪ್ಪಿದವರಲ್ಲಿ ಎರಡು ಕುಟುಂಬಗಳ ಜನರು ಸೇರಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಬಲಿಜೋಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್​ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಅಪಘಾತದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಪಘಾತ ಸಂದರ್ಭದಲ್ಲಿ ವ್ಯಾನ್ ವೇಗವಾಗಿ ಚಲಿಸುತ್ತಿತ್ತು. ಮಂಜು ಇದ್ದುದರಿಂದ ಚಾಲಕನಿಗೆ ಟ್ರಕ್ ನಿಂತಿರುವುದು ಕಾಣಿಸದೇ ಇರುವ ಸಾಧ್ಯತೆ ಇದೆ. \