Saturday, 14th December 2024

ಒಡಿಶಾದ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ

ಭುವನೇಶ್ವರ: ಬುಡಕಟ್ಟು ಸಮುದಾಯದ ನಾಯಕ ಮೋಹನ್ ಚರಣ್ ಮಾಝಿ ಅವರು ಇಂದು ಒಡಿಶಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಭುವನೇಶ್ವರದ ಜನತಾ ಮೈದಾನದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರು ಪ್ರಮಾಣ ವಚನ ಬೋದಿಸಿದರು. ಇದೇ ವೇಳೆ, ಉಪ ಮುಖ್ಯಮಂತ್ರಿಗಳಾಗಿ ಕೆ.ವಿ. ಸಿಂಗ್​ ದೇವ್ ಮತ್ತು ಪ್ರವತಿ ಪರಿದಾ ಪ್ರಮಾಣವಚನ ಸ್ವೀಕರಿಸಿದರು. ಮೋಹನ್ ಮಾಝಿ ಅವರು ರಾಜ್ಯದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಒಡಿಶಾದ ಮಾಜಿ ಸಿಎಂ ನವೀನ್ ಪಟ್ನಾಯಕ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವರು ಗಣ್ಯರು ಭಾಗವಹಿಸಿದ್ದರು. ಮಾಜಿ ಸಿಎಂ ನವೀನ್ ಪಟ್ನಾಯಕ್ ಅವರನ್ನು ಇಂದು ಮುಂಜಾನೆ ಭೇಟಿ ಮಾಡಿದ ಮಾಝಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದ್ದರು. ಭುವನೇಶ್ವರದಲ್ಲಿರುವ ನವೀನ್​ ಪಟ್ನಾಯಕ್ ಅವರ ನಿವಾಸಕ್ಕೆ ತೆರಲಿ ಸಮಾರಂಭಕ್ಕೆ ಚಾಲನೆ ನೀಡಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು 67 ತುಕಡಿ ಪೊಲೀಸ್ ಪಡೆಯನ್ನು ನಿಯೋಜಿಸ ಲಾಗಿತ್ತು. ಇತ್ತೀಚೆಗಷ್ಟೇ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 147 ಸ್ಥಾನಗಳಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಜೆಡಿ 51 ಸ್ಥಾನಗಳನ್ನು ಗೆಲುವು ಸಾಧಿಸಿತ್ತು.

53 ವರ್ಷದ ಮೋಹನ್ ಚರಣ್ ಮಾಝಿ ಕೆಂಜೋರ್ ನಿಂದ ನಾಲ್ಕು ಬಾರಿ ಶಾಸಕರಾಗಿ ಗೆದ್ದಿದ್ದಾರೆ. ಮೋಹನ್ ಅವರು 2000 ರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಕೆಂಜೂರಿನಿಂದ ಸ್ಪರ್ಧಿಸಿ ಗೆದ್ದಿದ್ದರು.