Wednesday, 11th December 2024

ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಒಮರ್ ಅಬ್ದುಲ್ಲಾ

ವದೆಹಲಿ: ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುವವರೆಗೆ ಚುನಾವಣೆಯಿಂದ ದೂರ ಉಳಿಯುವುದಾಗಿ ಈ ಹಿಂದೆ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ನಿರ್ಧಾರ ಬದಲಿಸಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಒಮರ್ ಅಬ್ದುಲ್ಲಾ ಪ್ರಸ್ತುತ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷರಾಗಿದ್ದು, ಚುನಾವಣೆಯಲ್ಲಿ ಅವರು ಗಂಧರ್ಬಲ್ ಕ್ಷೇತ್ರದಿಂದ ಸ್ಪರ್ಧಿಸಲಿ ದ್ದಾರೆ ಎಂದು ಎನ್‌ಸಿ ಅಧಿಕೃತವಾಗಿ ಘೋಷಿಸಿದೆ.

ಒಮರ್ ಅಬ್ದುಲ್ಲಾ ಅವರು ಭಾನುವಾರ ಗಂಧರ್ಬಲ್ ಜಿಲ್ಲೆಯ ನೂನರ್ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಳೆದ ಲೋಕಸಭೆ ಚುನಾವಣೆ ಯಲ್ಲಿ ಸ್ಪರ್ಧಿಸಿ ಸೋತಿದ್ದ ಸಯೀಮ್ ಮುಸ್ತಫಾ, ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದೇ ಸಂದರ್ಭದಲ್ಲಿ ಒಮರ್ ಅಬ್ದುಲ್ಲಾ ಸ್ಪರ್ಧಿಸಲಿರುವ ವಿಷಯವನ್ನು ಪಕ್ಷದ ಮುಖಂಡರು ಘೋಷಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಚುನಾವಣಾ ಮತದಾನ ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಕಾಶ್ಮೀರ ಕಣಿವೆ ಮತ್ತು ಜಮ್ಮು ವಿಭಾಗದ 24 ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 18 ರಂದು ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ ಸೆಪ್ಟೆಂಬರ್ 25 ರಂದು ಮತ್ತು ಅಂತಿಮ ಹಂತದ ಮತದಾನ ಅಕ್ಟೋಬರ್ 1 ರಂದು ನಡೆಯಲಿದೆ. ಅಕ್ಟೋಬರ್ 4 ರಂದು ಮತ ಎಣಿಕೆ ನಡೆಯಲಿದ್ದು, ಅ. 6ಕ್ಕೆ ಮತದಾನ ಪ್ರಕ್ರಿಯೆ ಮುಕ್ತಾಯವಾಗಲಿದೆ.