Friday, 22nd November 2024

ಹಿಜಾಬ್‌ ವಿರೋಧಿಸಿ ಶಾಲೆಯ ಮುಂದೆ ಪ್ರತಿಭಟನೆ: ಓರ್ವನ ಬಂಧನ

ವಾರಣಾಸಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಲು ಅವಕಾಶ ನೀಡಬಾರದು ಎಂದು ಶಾಲಾ ಅಧಿಕಾರಿಗಳಿಗೆ ಒತ್ತಾಯ ಮಾಡಿ ಏರ್‌ಪೋರ್ಟ್ ರಸ್ತೆಯ ಶಾಲೆಯೊಂದರ ಮುಂದೆ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದ ಯುವಕನನ್ನು ಬಂಧಿಸಲಾಗಿದೆ.

ಶಾಲೆಯಲ್ಲಿ ಡ್ರೆಸ್’ಕೋಡ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ, ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಶಾಲೆಯ ಪ್ರಾಂಶುಪಾಲೆ ನಿರ್ಮಲಾ ರಾಥೋಡ್ ಸ್ಪಷ್ಟಪಡಿಸಿದ್ದಾರೆ. ಪ್ರಾಂಶುಪಾಲೆ ದೂರಿನ ಮೇರೆಗೆ, ಪೊಲೀಸರು ಭಾರ್ಲಾಯ್ ಪ್ರದೇಶದ ಹಿಮಾಂಶು ಚತುರ್ವೇದಿ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದು, ಬಳಿಕ ಬಂಧಿಸಿದ್ದಾರೆ.

ಸದ್ಯ ಹಿಜಾಬ್‌ ವಿವಾದವು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಟ್ಟಿದೆ. ಈ ಬಗ್ಗೆ ಅಂತಿಮ ತೀರ್ಪು ಬರುವವ ರೆಗೂ ಶಾಲಾ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನು ನಿಷೇಧ ಮಾಡಿ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟ ಮಾಡಿದೆ.

ಶಾಲೆಯ ಪ್ರಾಂಶುಪಾಲರು ಅನೇಕ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಶಾಲೆಗೆ ಬರಲು ಅನುಮತಿ ನೀಡಿದ್ದಾರೆ ಎಂದು ಹಿಮಾಂಶು ಚತುರ್ವೇದಿ ಆರೋಪ ಮಾಡಿದ್ದಾರೆ. ಆದರೆ ಶಾಲೆಯ ಪ್ರಾಂಶುಪಾಲೆ ನಿರ್ಮಲಾ ರಾಥೋಡ್ ಶಾಲೆಯಲ್ಲಿ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ ಮತ್ತು ಯಾವುದೇ ವಿದ್ಯಾರ್ಥಿನಿಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಸ್ಪಷ್ಟಪಡಿಸಿದ್ದಾರೆ.