Thursday, 12th December 2024

ಪಾಕಿಸ್ತಾನದಿಂದ ಶೆಲ್, ಗುಂಡಿನ ದಾಳಿ, ಓರ್ವ ಯೋಧ ಹುತಾತ್ಮ

ಜಮ್ಮು: ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮುಂಚೂಣಿ ಠಾಣೆ ಮೇಲೆ ಪಾಕಿಸ್ತಾನ ಸೇನೆ ಶುಕ್ರವಾರ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಹುತಾತ್ಮನಾಗಿದ್ದಾನೆ.

ಜಿಲ್ಲೆಯ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಅಪ್ರಚೋದಿತ ದಾಳಿಗೆ ಭಾರತದ ಸೇನೆ ಸೂಕ್ತ ಪ್ರತ್ಯುತ್ತರ ನೀಡಿತು.

ಈ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರ ಗಾಯಗೊಂಡಿದ್ದ ಯೋಧ ರವಿಂದರ್ ಅನಂತರ ಸಾವನ್ನಪ್ಪಿದರು ಎಂದು ತಿಳಿಸಿದ್ದಾರೆ.