ನವದೆಹಲಿ: ದೇಶಾದ್ಯಂತ ವ್ಯಾಪಕ ಚರ್ಚೆಯಲ್ಲಿರುವ ಒಂದು ದೇಶ ಒಂದು ಚುನಾವಣೆ (One Nation One Election) ಮಸೂದೆಯನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಅವರು ಇದೇ ಡಿ.16 ರಂದು ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಗುರುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಹು ನಿರೀಕ್ಷಿತ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಅನುಮತಿ ನೀಡಲಾಗಿದ್ದು. ಇದನ್ನು ತ್ವರಿತವಾಗಿ ಜಾರಿಗೊಳಿಸಲು ಮುಂದಾಗಿದೆ. ಚಳಿಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗಿದ್ದು, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಡಿ.16 ರಂದು ಮಂಡನೆಯಾಗುವುದು ಖಚಿತವೆಂದು ಹೇಳಲಾಗಿದೆ.
ಏತನ್ಮಧ್ಯೆ ಅರ್ಜುನ್ ರಾಮ್ ಮೇಘವಾಲ್ ಅವರು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ, 2024 ಅನ್ನು ಸಹ ಮಂಡಿಸಲಿದ್ದಾರೆ. ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಕಾಯಿದೆ, 1963, ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶ ಕಾಯ್ದೆ, 1991 ಮತ್ತು ಜಮ್ಮುಗೆ ತಿದ್ದುಪಡಿ ಮಾಡಲು ಮತ್ತಷ್ಟು ಮಸೂದೆಯನ್ನು ಪರಿಚಯಿಸಲು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ಮಸೂದೆಯನ್ನು ಮಂಡನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ವಿಪಕ್ಷಗಳ ವಿರೋಧ
ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯ ಕೇಂದ್ರ ಸರ್ಕಾರವು ಈಗಾಗಲೇ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು ನಾನಾ ರಾಜ್ಯಗಳಿಗೆ ಭೇಟಿ ನೀಡಿ, ತಜ್ಞರ ಸಲಹೆಗಳನ್ನು ಆಧರಿಸಿ ವರದಿಯನ್ನು ಕಳೆದ ಸೆಪ್ಟಂಬರ್‌ಲ್ಲಿಯೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ಸರ್ಕಾರ ಅದನ್ನು ಮಂಡಿಸಲು ಸಜ್ಜಾಗಿದೆ.
ಆದರೆ ಸರ್ಕಾರದ ಈ ನೀತಿಯ ಕುರಿತು ವಿಪಕ್ಷಗಳು ವಿರೋಧ ವ್ಯಕ್ತ ಪಡಿಸಿವೆ. ಒಂದು ವೇಳೆ ರಾಜ್ಯ ಸರ್ಕಾರ ಆರು ತಿಂಗಳಲ್ಲಿ ಪತನವಾದರೆ ಅಥವಾ ಬಹುಮತ ಕಳೆದುಕೊಂಡರೆ ಉಳಿದ 4.5 ವರ್ಷಗಳ ಕಾಲ ರಾಜ್ಯ ಸರ್ಕಾರವಿಲ್ಲದೆಯೇ ಇರಬೇಕಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಪ್ರಸ್ತಾವಿತ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, ಮಸೂದೆಯು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಎಂದು ಪ್ರತಿಪಾದಿಸಿದರು.
ಇಂಡಿಯಾ ಮೈತ್ರಿಕೂಟದ ಸಂಸದರು ಸರ್ಕಾರದ ಈ ನಡೆಯನ್ನು ವಿರೋಧಿಸಿವೆ. ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಸೂದೆಯನ್ನು ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲಾದ ನಂತರ ಅದನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಿ ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ನಾವು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ : Kangana Ranaut : ಕೃಷಿ ಕಾನೂನುಗಳನ್ನು ವಾಪಸ್ ತಂದೇ ತರುತ್ತೇವೆ ಎಂದ ಕಂಗನಾ ರಣಾವತ್