Sunday, 15th December 2024

32 ರಾಜ್ಯಗಳಲ್ಲಿ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿ

ನವದೆಹಲಿ : ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಈ ಯೋಜನೆಯನ್ನು 32 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದರೂ, ಪಡಿತರ ಧಾನ್ಯಗಳನ್ನು ಪಡೆಯಬಹುದಾಗಿದೆ.

ಬಜೆಟ್-2021 ಮಂಡಿಸುತ್ತಾ ತಿಳಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ದೇಶದ 32 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಿದರು.