ನವದೆಹಲಿ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯು ಸಾರ್ವಜನಿಕರಿಂದ ಸುಮಾರು 21,000 ಸಲಹೆಗಳನ್ನು ಸ್ವೀಕರಿಸಿದೆ.
46 ರಾಜಕೀಯ ಪಕ್ಷಗಳಿಂದಲೂ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇಲ್ಲಿಯವರೆಗೆ 17 ರಾಜಕೀಯ ಪಕ್ಷಗಳಿಂದ ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದೆ. ಕಾಂಗ್ರೆಸ್ ಮತ್ತು ಟಿಎಂಸಿ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಏಕಕಾಲಕ್ಕೆ ಚುನಾವಣೆ ನಡೆಸುವ ವಿಚಾರವನ್ನು ವಿರೋಧಿಸಿವೆ.
ಜ.5 ರಂದು, ಸಮಿತಿಯು ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ಸಕ್ರಿಯಗೊಳಿಸಲು ಅಸ್ತಿತ್ವದಲ್ಲಿರುವ ಕಾನೂನು ಮತ್ತು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ನಾಗರಿಕರಿಂದ ಸಲಹೆಗಳನ್ನು ಆಹ್ವಾನಿಸುವ ಸಾರ್ವಜನಿಕ ಸೂಚನೆಯನ್ನು ನೀಡಿತ್ತು.